Breaking
25 Sep 2026, Fri

ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಕೊಯಿಲ ಪ್ರೌಢಶಾಲಾ ವಿಜೇತರಿಗೆ ಅಭಿನಂದನೆ

ಬಂಟ್ವಾಳ: ಇತ್ತೀಚೆಗೆ ಸುಳ್ಯದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ, ಕೊಯಿಲ ಬಂಟ್ವಾಳ ತಾಲೂಕು ಇಲ್ಲಿನ ಐದು ವಿದ್ಯಾರ್ಥಿಗಳು ಭಾಗವಹಿಸಿ ಕಟ ಹಾಗೂ ಕುಮಿಟೆ ಕಲರ್ ಬೆಲ್ಟ್ ವಿಭಾಗದಲ್ಲಿ ಮೂರು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕಗಳನ್ನು ಪಡೆದಿದ್ದಾರೆ.

ಇವರನ್ನು ಶಾಲಾ ಮುಖ್ಯೋಪಾಧ್ಯಾಯರಾದ ಸೌಜನ್ಯ ದೈಹಿಕ ಶಿಕ್ಷಣ ಶಿಕ್ಷಕರಾದ ಜನಾರ್ಧನ್, ಹಿರಿಯ ಶಿಕ್ಷಕಿ ಸೌಮ್ಯ ಎಚ್, ಕರಾಟೆ ತರಬೇತುದಾರರಾದ ಸೆನ್ಸಾಯಿ ಜೆರಾಲ್ಡ್ ಫೆರ್ನಾಂಡಿಸ್ ಫೆಧಾಮಲೆ ಅಭಿನಂದಿಸಿದರು.

Leave a Reply

Your email address will not be published. Required fields are marked *