ಹಾಸನ: ಕ್ಯಾಂಟರ್ ಡಿಕ್ಕಿಯಾಗಿ ಸಾರಿಗೆ ಬಸ್ ಟಿಕೆಟ್ ಚೆಕಿಂಗ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.
ಮೃತರನ್ನು ಕೆಎಸ್ಸಾರ್ಟಿಸಿ ಹಾಸನ ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣೆ ಇನ್ಸ್‌ಪೆಕ್ಟರ್ ಶಕುನಿ ಗೌಡ (57) ಎಂದು ಗುರುತಿಸಲಾಗಿದೆ.

ಶಕುನಿಗೌಡ ಅವರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಾರಿಗೆ ಬಸ್ ತಡೆದು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸಲು ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ಶಕುನಿಗೌಡ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದ ನಂತರ ಕ್ಯಾಂಟರ್ ನಿಲ್ಲಿಸದೆ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.
ಈ ಬಗ್ಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





