ಮಂಗಳೂರು: ನಗರದ ಪಡೀಲ್‌ನ ಕೊಡಕ್ಕಲ್ ಎಂಬಲ್ಲಿ ಮನೆ ಪಕ್ಕದ ಮರಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಶ್ರವಣ್ ರಾಜ್ ಕಂಬ್ಳಿ(23) ಎಂದು ಗುರುತಿಸಲಾಗಿದ್ದು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಡಿ.12 ರಂದು ಶ್ರವಣ್ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಿಂದ ಹೊರಗೆ ಹೋಗಿದ್ದ ಅವರು ರಾತ್ರಿಯಾದರೂ ವಾಪಾಸು ಬಂದಿರಲಿಲ್ಲ. ಬೆಳಗ್ಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ ಪಡೀಲ್ ನ ಕೊಡಕ್ಕಲ್ ಬಳಿ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.




