ಬಂಟ್ವಾಳ: ಕೇಪು ಗ್ರಾಮದ ಕುದ್ದುಪದವು-ಪೆರುವಾಯಿ-ಮಾಣಿಲ ರಸ್ತೆಯ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಇಬ್ಬರಿಗೆ ಗಾಯಗೊಂಡ ಘಟನೆ ನಡೆದಿದೆ.

ಮೃತಪಟ್ಟವರನ್ನು ಮೈರ ಮೋನಪ್ಪ ಕುಲಾಲ್ (65) ಎಂದು ಗುರುತಿಸಲಾಗಿದ್ದು ಗಾಯಗೊಂಡವರನ್ನು ಮೈರ ನಿವಾಸಿಗಳಾದ ಲಲಿತಾ ಕುಲಾಲ್ ಮತ್ತು ರಮಣಿ ಕುಲಾಲ್ ಎಂದು ಗುರುತಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಓಮ್ನಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮದ್ಯದಲ್ಲಿ ಮೋನಪ್ಪ ಕುಲಾಲ್ ಮೃತಪಟ್ಟಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಅಪಘಾತದ ಕಾರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.





