Breaking
26 Jun 2026, Fri

ಸನಾತನ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ: ರಾಘವೇಂದ್ರ ಭಟ್

ಬಂಟ್ವಾಳ : ಯಕ್ಷಗಾನವು ಧರ್ಮಾಧಾರಿತ ಚಿಂತನೆಯನ್ನು ಹೊಂದಿದ್ದು, ಸನಾತನ ಧರ್ಮದ ಉಳಿವಿಗೆ ಯಕ್ಷಗಾನದ ಕೊಡುಗೆ ಅಪಾರ. ಧರ್ಮದ ಉಳಿವಿಗೆ ಯಕ್ಷಗಾನವನ್ನು ಉಳಿಸಿ, ಬೆಳೆಸುವ ಯಕ್ಷ ಕೂಟ ಮಧ್ವದ ಕಾರ್ಯ ಅಭಿನಂದನೀಯ ಎಂದು ಮಧ್ವ, ಮಧ್ವಕಟ್ಟೆಯ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಅವರು ಹೇಳಿದರು.

ಕಾವಳಪಡೂರು ಗ್ರಾಮದ ಮಧ್ವದ ಮಧ್ವಪ್ಯಾಲೆಸ್ ಸಭಾಂಗಣದಲ್ಲಿ ನಡೆದ ಮಧ್ವ ಯಕ್ಷಕೂಟ ಇದರ 6ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ, ಯಕ್ಷಗಾನ ನಮ್ಮ ಸಂಸ್ಕೃತಿ, ಪರಂಪರೆ, ಆಧ್ಯಾತ್ಮಿಕ, ನೈತಿಕ ಮೌಲ್ಯಗಳನ್ನು ತಿಳಿಸುವ ಏಕೈಕ ಕಲಾಪ್ರಾಕಾರವಾಗಿದೆ. ಮೆದುಳಿಗೆ ಜ್ಞಾನ ದೊರಕುವ ಯಕ್ಷಗಾನದಲ್ಲಿ ಯುವ ಜನತೆ ಹೆಚ್ಚು ತೊಡಗಿಸಕೊಳ್ಳಬೇಕು ಎಂದರು.

ಮೂಡುಬಿದಿರೆ ಮಹಾವೀರ ಕಾಲೇಜ್ ನ ಪ್ರಾಂಶುಪಾಲರಾದ ಡಾ| ರಾಧಾಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನ ಕಲೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು, ಆಧುನಿಕ ಮೊಬಲ್ ಯುಗದಲ್ಲಿ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡಬೇಕು. ಮಧ್ವಾಚಾರ್ಯರು ವಿಶ್ರಮಿಸಿದ ಸ್ಥಳವಾದ ಮಧ್ವದಲ್ಲಿ ಯಕ್ಷಗಾನ ಸೇವೆ ನಡೆಸುತ್ತಿರುವುದು ಉತ್ತಮ ಕಾರ್ಯ ಎಂದರು.

ಬಳ್ಳಮಂಜ ಉದ್ಯಮಿ ಜಯಪ್ರಕಾಶ್ ಸಂಪಿಗೆತ್ತಾಯ, ತುಳುಕೂಟ ಬಂಟ್ವಾಳ ಅಧ್ಯಕ್ಷ ಸುದರ್ಶನ ಜೈನ್ ಶುಭ ಹಾರೈಸಿದರು. ಹಿರಿಯ ಯಕ್ಷಗಾನ ಅರ್ಥಧಾರಿ ಸದಾಶಿವ ಆಳ್ವ ತಲಪಾಡಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್, ಕಾವಳಪಡೂರು ಗ್ರಾ.ಪಂ.ಸದಸ್ಯೆ ಭವಾನಿ ಶ್ರೀಧರ್ ಪೂಜಾರಿ, ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಪ್ರಬಂಧಕ ಗೋಪಾಲಕೃಷ್ಣ ಶೆಟ್ಟಿ, ಮಧ್ವ ಪ್ಯಾಲೇಸ್ ಮಾಲಕ ರುಕ್ಮಯ್ಯ ಗೌಡ,ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಪಂಜಿಕಲ್ಲು, ಕಾರ್ಯದರ್ಶಿ ಗಣನಾಥ ಶೆಟ್ಟಿ, ಶಿವಪ್ಪ ಗೌಡ ನಿನ್ನಿಕಲ್ಲು, ಸುರೇಂದ್ರ ಶೆಟ್ಟಿ, ಸುಜಾತ ಶೆಟ್ಟಿ, ಯುವರಾಜ ಶೆಟ್ಟಿ, ಕಾರಿಂಜ ಯಕ್ಷಾವ್ಯಾಸಂ ಸಂಚಾಲಕಿ ಸಾಯಿಸುಮಾ ಎಂ.ನಾವಡ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷ ಭಾಸ್ಕರ ಶೆಟ್ಟಿ ಮಧ್ವ ಅವರು ಸ್ವಾಗತಿಸಿದರು. ರಂಗ ಕಲಾವಿದ ರತ್ನದೇವ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಜಿಲ್ಲೆಯ ಹವ್ಯಾಸಿ ಕಲಾವಿದರ ಕೂಡುವಿಕೆಯಲ್ಲಿ ಶ್ರೀ ಕೃಷ್ಣ ಸಂಧಾನ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು.

Leave a Reply

Your email address will not be published. Required fields are marked *