ಬಂಟ್ವಾಳ: ಸಜೀಪ ನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ರಂಗ ಪೂಜೆ ಸೇವೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ , ಅರ್ಚಕ ಗಣಪತಿ ಮಹಾಬಲೇಶ್ವರ ಭಟ್.ಕೆ, ರಾಧಾಕೃಷ್ಣ ಆಳ್ವ, ಸತ್ಯನಾರಾಯಣ ನಾಯಕ್, ಸುಧಾಕರ ಕೆಟಿ, ಕಿಶನ್ ಸೇಣವ, ಸೋಮನಾಥ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.




