ಮಂಗಳೂರು: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಸಜಿಪಮುನ್ನೂರು ಗ್ರಾಮದ ನಿವಾಸಿ ಅಬ್ದುಲ್ ಖಾದರ್ ನೇಹಾದ್ (27) ಎಂದು ಗುರುತಿಸಲಾಗಿದೆ.
ಅ. 11ರಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ _sdpi_2025_ID ಎಂಬ ಖಾತೆಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.





