Breaking
10 May 2026, Sun

ಕೆ.ಎಸ್.ಆ‌ರ್.ಟಿ.ಸಿ ಬಸ್ ಮತ್ತು ಬೈಕ್‌ ನಡುವೆ ಅಪಘಾತ : ಬೈಕ್ ಸವಾರ ಸಾವು

ಬೆಳ್ತಂಗಡಿ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಎಂಬಲ್ಲಿ ಕೆ.ಎಸ್.ಆ‌ರ್.ಟಿ.ಸಿ ಬಸ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಪುಂಜಾಲಕಟ್ಟೆ ಪುರಿಯ ರಸ್ತೆಯ ಎಲೆಕ್ಟ್ರಿಷಿಯನ್ ನೋಯೆಲ್ ಜೋಸೆಫ್ ಪಿಂಟೋ (38) ಎಂದು ಗುರುತಿಸಲಾಗಿದ್ದು ವೇಣೂರು ಮೆಸ್ಕಾಂ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮನೆಯಲ್ಲಿ ಕೆಲಸದವರಿಗೆ ಕಾಫಿ ತಿಂಡಿ ತರಲು ಮಡಂತ್ಯಾರು ಬರುವ ವೇಳೆ ಕೆ.ಎಸ್.ಆ‌ರ್.ಟಿ. ಸಿ ಬಸ್, ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಮೃತರು ತಾಯಿ , ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *