Breaking
26 Jun 2026, Fri

ಅಕ್ರಮ ಗೋ ಸಾಗಾಟ ಪ್ರಕರಣ; ಜಾನುವಾರು ನೀಡಿದ ವ್ಯಕ್ತಿ ಮನೆ, ಕೊಟ್ಟಿಗೆ ಜಪ್ತಿ

ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರು ನೀಡಿದ ವ್ಯಕ್ತಿಯ ಮನೆ ಮತ್ತು ಕೊಟ್ಟಿಗೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸರು ಡಿ.13ರಂದು ಗೂಡ್ಸ್ ಆಟೋವನ್ನು ತಡೆದು ವಾಹನದ ಚಾಲಕನಲ್ಲಿ ವಿಚಾರಿಸಿದಾಗ, ಆತನು ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ (56) ಎಂಬುದಾಗಿ ತಿಳಿಸಿದ್ದಾನೆ. ಆತನು ಬಂಟ್ವಾಳ ಸರಪಾಡಿ ಎಂಬಲ್ಲಿನ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ಆರೋಪಿಯಿಂದ ಜಾನುವಾರು, ಆಟೋ ಹಾಗೂ ಒಂದು ಮೊಬೈಲ್ ಫೋನ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *