Breaking
23 Mar 2026, Mon

ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ: ಯುವಕನ ಸಾವು

ಬ್ರಹ್ಮಾವರ: ತಾಲೂಕಿನ ಕೋಟತಟ್ಟು ಗ್ರಾಮದ ಪಡುಕರೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ನಡೆದ ಹೊಡೆದಾಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಡಿ.14 ರ ತಡರಾತ್ರಿ ನಡೆದಿದೆ.

ಮೃತಪಟ್ಟವರನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.

ಡಿ.14 ರಂದು ತಡರಾತ್ರಿ ಮದ್ಯಪಾನ ಪಾರ್ಟಿ ಮಾಡಿದ್ದ ಯುವಕರ ತಂಡದ ನಡುವೆ ಕ್ಷುಲ್ಲಕ ವಿಚಾರವಾಗಿ ಮಾತಿನ ಚಕಮಕಿ ನಡೆದು ಬಳಿಕ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸಂತೋಷ ಅವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯರು ತಕ್ಷಣವೇ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದ ಕೂಡಲೇ ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ಪೊಲೀಸರುವಶಕ್ಕೆ ಪಡೆದಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *