Breaking
25 Sep 2026, Fri

ತಲ್ವಾರ್ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಆರೋಪಿಗಳ ಬಂಧನ

ಮ೦ಗಳೂರು : ತಲ್ವಾರ್ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಜೆ.ಡಮ್ ರೋಡ್ ಬ೦ದರು ನಿವಾಸಿ ಅಮೀರ್ ಸುಹೇಲ್ (28) ಹಾಗೂ ಉರುಂದಾಡಿಗುಡ್ಡೆ ಕಾವೂರು ನಿವಾಸಿ ಸುರೇಶ (29) ಎಂದು ಗುರುತಿಸಲಾಗಿದೆ.

ಆರೋಪಿಗಳು ಫೇಸ್ ಬುಕ್ ಖಾತೆಯಲ್ಲಿ ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಮಾಡಿದ್ದರು. ಈ ಬಗ್ಗೆ ಕಾವೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *