Breaking
23 Mar 2026, Mon

ನಿಲ್ಲಿಸಿದ್ದ ಗೂಡ್ಸ್ ಲಾರಿ ಬೆಂಕಿಗಾಹುತಿ: 40 ಬೈಕ್ ಗಳು ಸುಟ್ಟು ಕರಕಲು

ಬಳ್ಳಾರಿ: ನಿಲ್ಲಿಸಿದ್ದ ಗೂಡ್ಸ್ ಲಾರಿಯೊಂದು ಬೆಂಕಿಗಾಹುತಿಯಾಗಿ ಅದರಲ್ಲಿದ್ದ 40 ಬೈಕ್ ಗಳು ಸುಟ್ಟು ಕರಕಲಾದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಅವಘಡದಲ್ಲಿ ಸುಮಾರು 45 ಲಕ್ಷ ರೂ. ಮೌಲ್ಯದ ಬೈಕ್ ಗಳು ಬೆಂಕಿಗೆ ಆಹುತಿಯಾಗಿವೆ.

ಸದ್ಯ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕ್ ಗಳನ್ನು ಚೆನೈಯಿಂದ ಬಳ್ಳಾರಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *