Breaking
26 Sep 2026, Sat

ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ: ಐದನೇ ಆರೋಪಿಯ ಬಂಧನ

ಉಡುಪಿ: ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದನೇ ಆರೋಪಿಯನ್ನು ಡಿ. 15ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಡುಪಿಯ ಮಿಷನ್ ಕಾಂಪೌಂಡ್ ಬಳಿಯ ಶಾಂತಿ ನಗರದ ನಿವಾಸಿ ಮಾಲಿ ಮೊಹಮ್ಮದ್ ಸಿಯಾನ್ (31) ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಪೊಲೀಸರು ಬೆಳಿಗ್ಗೆ 10.30 ರ ಸುಮಾರಿಗೆ ಎಂಜಿಎಂ ಕಾಲೇಜು ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧನದ ವೇಳೆ ಅಪರಾಧ ಕೃತ್ಯಕ್ಕೆ ಬಳಸಲಾಗಿದೆ ಎನ್ನಲಾದ KA20 MF 207 ನೋಂದಣಿ ಸಂಖ್ಯೆಯನ್ನು ಹೊಂದಿರುವ ಕಾರು ಮತ್ತು ಆರೋಪಿ ಬಳಸಿದ್ದ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 4 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Leave a Reply

Your email address will not be published. Required fields are marked *