ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ಶಾಲಾ ಮಟ್ಟದ 17ರ ವಯೋಮಿತಿಯ ಬಾಲಕ ಬಾಲಕಿಯರ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶಮೀದ್ ಅಬ್ದುಲ್ 69 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ 10ನೇ ತರಗತಿಯ ವಿದ್ಯಾರ್ಥಿ ವೈಷ್ಣವಿ 80 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ 48 ಕೆಜಿ ವಿಭಾಗದಲ್ಲಿ ವಂದ್ಯ ಮತ್ತು 55ಕೆಜಿ ವಿಭಾಗದಲ್ಲಿ ಸಾನ್ವಿ ತೃತೀಯ ಸ್ಥಾನ ಪಡೆದಿದ್ದಾರೆ.
ಹತ್ತನೇ ತರಗತಿಯ ವಿದ್ಯಾರ್ಥಿ ಈಶಾನ್ ಕಾರ್ಯಪ್ಪ ಸೇರಾಜೆ 102 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದರು. ಪ್ರಥಮ ಸ್ಥಾನ ಪಡೆದ ಶಮೀದ್ ಅಬ್ದುಲ್ ಹಾಗೂ ಈಶಾನ್ ಕಾರ್ಯಪ್ಪ ಸೇರಾಜೆ ಡಿಸೆಂಬರ್ ನಲ್ಲಿ ಮಣಿಪುರದ ಇಂಪಾಲ್ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ದೈಹಿಕ ಶಿಕ್ಷಕರಾದ ಶ್ರೀ ಭಾನುಪ್ರಕಾಶ್ ಅವರು ತರಬೇತಿ ನೀಡಿದ್ದರು.
ಇದಲ್ಲದೇ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕರ ವಿಭಾಗದ ಹ್ಯಾಮರ್ ತ್ರೋ ದಲ್ಲಿ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಈಶಾನ್ ಕಾರ್ಯಪ್ಪ ಸೇರಾಜೆ ಪ್ರಥಮ ಸ್ಥಾನ ಪಡೆದು ನವೆಂಬರ್ ತಿಂಗಳ ಕೊನೆಯ ವಾರದಲ್ಲಿ ಲಕ್ನೋದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.