Breaking
23 Mar 2026, Mon

ಮಲೆನಾಡಿನಲ್ಲಿ ಮಂಗನ ಕಾಯಿಲೆ: 8 ಜನರಿಗೆ ಪಾಸಿಟಿವ್

ಶಿವಮೊಗ್ಗ: ಮಲೆನಾಡಿನಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಈವರೆಗೆ ಒಟ್ಟು 8 ಜನರಲ್ಲಿ ಕೆ.ಎಫ್.ಡಿ. ಸೋಂಕು ಕಾಣಿಸಿಕೊಂಡಿದ್ದು, ಇದರಲ್ಲಿ 7 ಜನರಿಗೆ ಪಾಸಿಟಿವ್ ಲಕ್ಷಣಗಳು ಗೋಚರಿಸಿದೆ. ಒಬ್ಬರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದು, ಮತ್ತೊಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ. ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಯಲ್ಲಿ 6 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸೋಂಕು ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕಂಡುಬರುತ್ತಿತ್ತು. ಇದಕ್ಕೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನೂ ತೆಗೆದುಕೊಳ್ಳುತ್ತಿತ್ತು. ಆದರೆ ಈ ವರ್ಷ ಡಿಸೆಂಬರ್ ತಿಂಗಳಲ್ಲೇ ಈ ಸೋಂಕು ಕಾಣಿಸಿಕೊಂಡಿದೆ.
ಈ ಬಗ್ಗೆ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚನೆ ನೀಡಿದೆ.

Leave a Reply

Your email address will not be published. Required fields are marked *