Breaking
26 Jun 2026, Fri

ಸರಕಾರಿ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಅವಶ್ಯ: ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಸಕ ಹರೀಶ್‌ ಪೂಂಜ ಮನವಿ

ಬೆಳ್ತಂಗಡಿ: ತಾಲೂಕಿನಲ್ಲಿರುವ ಕೆಲವು ಸರಕಾರಿ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಅವಶ್ಯ ಅನುದಾನ ಒದಗಿಸುವಂತೆ, ಸಂಬಂಧಿಸಿದ ಇಲಾಖೆಗೆ ಪ್ರಸ್ತಾವನೆ ಕಳುಹಿಸಲು ಶಾಸಕ ಹರೀಶ್‌ ಪೂಂಜ ಅವರು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಸರಕಾರಿ ಶಾಲೆಯಲ್ಲಿನ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳು ಇಲ್ಲದೇ ಇರುವುದರಿಂದ ಶಾಲಾ ಶಿಕ್ಷಕರು, ಮಕ್ಕಳು ತೊಂದರೆ ಅನುಭವಿಸುತ್ತಿದ್ದು, ಹೀಗಾಗಿ ಮಕ್ಕಳ ವಿದ್ಯಾರ್ಜನೆಗೆ ಅನುಕೂಲವಾಗುವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲೇದು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಕೋಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಿರೆ, ಸರಕಾರಿ ಪ್ರೌಢ ಶಾಲೆ ನಾವೂರು, ಸರಕಾರಿ ಪ್ರೌಢ ಶಾಲೆ ಕಲ್ಮಂಜ, ಸರಕಾರಿ ಪ್ರೌಢ ಶಾಲೆ ಬಳೆಂಜ, ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲು ಈ ಎಲ್ಲಾ ಶಾಲೆಗಳಿಗೆ ತಲಾ 1 ಕೊಠಡಿ ಹಾಗೂ ಪ್ರಾಥಮಿಕ ಪಬ್ಲಿಕ್‌ ಸ್ಕೂಲ್‌ ಪುಂಜಾಲಕಟ್ಟೆಗೆ 2 ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *