Breaking
26 Sep 2026, Sat

ಅಕ್ಷತಾ ಪೂಜಾರಿ ಮೇಲೆ ಪೊಲೀಸ್‌ ಹಲ್ಲೆ ಪ್ರಕರಣ: ʼತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸ್‌ ದಾಖಲಿಸಿʼ : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಆರೋಪಿಯನ್ನು ಹುಡುಕುವ ನೆಪದಲ್ಲಿ ಬೆಳ್ಳಂಬೆಳಗ್ಗೆ ಅಕ್ಷತಾ ಪೂಜಾರಿ ಮನೆಗೆ ಅಕ್ರಮವಾಗಿ ಪ್ರವೇಶ ಮಾಡಿರುವ ಪೊಲೀಸ್‌ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ, ಯುವತಿ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಯುವತಿ ದೂರು ಕೊಟ್ಟಾಗ ಠಾಣಾಧಿಕಾರಿಗಳು ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಈ ಪ್ರಕರಣವನ್ನು ಪೊಲೀಸ್ ವರಿಷ್ಠಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸು ದಾಖಲಿಸಿ ಯುವತಿಗೆ ನ್ಯಾಯ ಒದಗುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *