Breaking
26 Jun 2026, Fri

ಮಹಿಳಾ ದೌರ್ಜನ್ಯ ಪ್ರಕರಣ: ಅಕ್ಷತಾ ಪೂಜಾರಿಗೆ ನ್ಯಾಯ ಒದಗಿಸಲು ಬಿಜೆಪಿ ಮಹಿಳಾಮೋರ್ಚಾ ವತಿಯಿಂದ ಮನವಿ

ಉಡುಪಿ: ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಷತಾ ಪೂಜಾರಿ ಅವರ ಮೇಲೆ ನಡೆದ ಮಹಿಳಾ ದೌರ್ಜನ್ಯದ ವಿರುದ್ಧ ತಕ್ಷಣ ಕ್ರಮ ಜರುಗಿಸಿ ನ್ಯಾಯ ಒದಗಿಸುವಂತೆ ಡಿ.16 ರಂದು ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾದ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಮಹಿಳಾಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಿಳಾಮೋರ್ಚಾದ ಜಿಲ್ಲಾಧ್ಯಕ್ಷರಾದ ಸಂದ್ಯಾ ರಮೇಶ್ , ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ್ ಶೆಟ್ಟಿ , ಕಾಪು ಮಂಡಲದ ಅಧ್ಯಕ್ಷರಾದ ನೀತಾ ಗುರುರಾಜ್ ಪೂಜಾರಿ , ಉಡುಪಿ ನಗರ ಅಧ್ಯಕ್ಷರಾದ ನೀತಾ ಪ್ರಭು , ಉಡುಪಿ ಗ್ರಾಮಾಂತರ ಅಧ್ಯಕ್ಷರಾದ ರಮ್ಯ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *