ಮಂಗಳೂರು: ತಡೆಗೋಡೆ ನಿರ್ಮಾಣ ಕಾರ್ಯದ ವೇಳೆ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟುವಿನ ಕಲ್ಲಾಪು ಸೇವಂತಿಗುತ್ತು ಬಳಿ ನಡೆದಿದೆ.

ಮೃತಪಟ್ಟವರನ್ನು ಹುನಗುಂದ ತಾಲೂಕಿನ ನಿವಾಸಿ ಬಾಳಪ್ಪ (45) ಎಂದು ಗುರುತಿಸಲಾಗಿದೆ.

ಐವರು ಕಾರ್ಮಿಕರು ತಡೆಗೋಡೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ದಿಬ್ಬವನ್ನು ಅಗೆಯಲು ಜೆಸಿಬಿ ಬಳಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಸ್ಥಳದಲ್ಲಿ ಗಾರೆ ಹಿಡಿದು ಕೆಲಸ ನಿರ್ವಹಿಸುತ್ತಿದ್ದ ಬಾಳಪ್ಪ ದಿಡೀರ್ ಕುಸಿತಗೊಂಡ ಮಣ್ಣಿನಡಿಯಲ್ಲಿ ಹೂತುಹೋದರು. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ತನಿಖೆ ಕೈಗೊಂಡಿದ್ದಾರೆ.




