Breaking
26 Sep 2026, Sat

ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ : ಏಳು ಮಂದಿಗೆ ಗಾಯ

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡ ಘಟನೆ ಧರ್ಮಸ್ಥಳ ಪೆರಿಯಶಾಂತಿ ಹೆದ್ದಾರಿಯ ನಿಡ್ಲೆಯ ಕುದುರೆಯ ತಲೆಕ್ಕಿ ಕ್ರಾಸ್ ಬಳಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದು ಖಾಸಗಿ ಬಸ್ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಖಾಸಗಿ ಮಿನಿ ಬಸ್ಸಿನಲ್ಲಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದು ಅಪಘಾತದಲ್ಲಿ ಏಳು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *