Breaking
23 Mar 2026, Mon

ಸುಮಾರು 42 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರ್‌ ರಾಜ್ಯ ಆರೋಪಿಗಳ ಬಂಧನ

ಮಂಗಳೂರು: ದರೋಡೆ, ಕಳ್ಳತನ ಹಾಗೂ ಕೊಲೆ ಪ್ರಕರಣ ಸೇರಿದಂತೆ ಸುಮಾರು 42 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರ್‌ ರಾಜ್ಯ ಆರೋಪಿಗಳನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಳ್ಳಾಲದ ನ್ಯೂ ತೋಟ ಹೌಸ್ ನ ಪೈಸಲ್‌, ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಎಂದು ಗುರುತಿಸಲಾಗಿದೆ.

ಡಿ.12 ರಂದು ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಯಮಹಾ FZ ಕಂಪನಿಯ ಬೈಕ್‌ ಕಳವು ಆದ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡು ಖಚಿತ ಮಾಹಿತಿಯ ಆಧಾರದ ಮೇಲೆ ಪ್ರಮುಖ ಆರೋಪಿ ಪೈಸಲ್‌, ನಿತೀನ್‌ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ವಿಚಾರಣೆಯ ವೇಳೆ ಡಿ. 13 ರಂದು ಭಟ್ಕಳ ತಾಲೂಕಿನಲ್ಲಿ ವಯೋವೃದ್ದ ಮಹಿಳೆಯಾದ ಹೊನ್ನಮ್ಮ ಮಹಾದೇವ ನಾಯ್ಕ್ ರವರ ಕುತ್ತಿಗೆಯಿಂದ ಚಿನ್ನದ ಚೈನ್ ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲೂ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ.

ಆರೋಪಿಗಳಿಂದ ಚಿನ್ನದ ಸರ-1, ಇದರ ಅಂದಾಜು ಮೌಲ್ಯ ರೂ 1,20,000 ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ಬೈಕ್-1 ಅಂದಾಜು ಮೌಲ್ಯ ರೂ 45,000 ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಆರೋಪಿ ಪೈಸಲ್ ವಿರುದ್ದ ವಿಟ್ಲ, ಬೆಳ್ತಂಗಡಿ, ಉಡುಪಿ, ಕಾರ್ಕಳ, ಮಣಿಪಾಲ, ಮಂಗಳೂರು ಸೇರಿದಂತೆ ಹಲವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.

Leave a Reply

Your email address will not be published. Required fields are marked *