Breaking
23 Mar 2026, Mon

ಅಕ್ಷತಾ ಪೂಜಾರಿ ಮೇಲೆ ಪೊಲೀಸ್‌ ದೌರ್ಜನ್ಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ವತಿಯಿಂದ ಇಂದು ಪ್ರತಿಭಟನೆ

ಉಡುಪಿ: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಕುಮಾರಿ ಅಕ್ಷತಾ ಪೂಜಾರಿ ಮತ್ತು ಅವರ ತಾಯಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಇಂದು(ಡಿ.17) ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ಉಡುಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬ್ರಹ್ಮಾವರ ಪೊಲೀಸ್ ಠಾಣೆ ಎದುರುಗಡೆ ಮಧ್ಯಾಹ್ನ 3:00 ಗಂಟೆಗೆ ಪ್ರತಿಭಟನೆ ಆರಂಭಗೊಳ್ಳಲಿದ್ದು ಈ ಮಹತ್ವದ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಪೊಲೀಸ್ ದೌರ್ಜನ್ಯವನ್ನು ಕೊನೆಗೊಳಿಸೋಣ. ನ್ಯಾಯಕ್ಕಾಗಿ ಒಂದಾಗಿ ನಿಲ್ಲೋಣ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ಉಡುಪಿ ಕರೆ ನೀಡಿದೆ.

Leave a Reply

Your email address will not be published. Required fields are marked *