Breaking
26 Sep 2026, Sat

ಅಕ್ಷತಾ ಪೂಜಾರಿ ಪರವಾಗಿ ಇಡೀ ಹಿಂದೂ ಸಮಾಜ ನಿಲ್ಲಬೇಕು : ರಮಿತ ಸೂರ್ಯವಂಶಿ

ಕಾರ್ಕಳ : ಆರೋಪಿಯನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಅಕ್ಷತಾ ಪೂಜಾರಿ ಮನೆಗೆ ಮಹಿಳಾ ಪೊಲೀಸರಿಲ್ಲದೆ ಕೇವಲ ಪುರುಷ ಪೊಲೀಸ್‌ ಅಧಿಕಾರಿಗಳು ಏಕಾಏಕಿ ನುಗ್ಗಿ, ಯುವತಿ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ರಮಿತ ಸೂರ್ಯವಂಶಿ ಖಂಡಿಸಿದ್ದು ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೋಲಿಸರು ನುಗ್ಗಿ, ಅಕ್ಷತಾ ಪೂಜಾರಿ ಎಂಬ ಮುಗ್ಧ ಯುವತಿಗೆ ಹಲ್ಲೆ ನಡೆಸಿದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸರಿಗೆ ದೂರು ಕೊಟ್ಟಾಗ ಠಾಣಾಧಿಕಾರಿ ಆಕೆಯ ಕೇಸನ್ನು ದಾಖಲಿಸದೆ ಪೊಲೀಸರನ್ನು ರಕ್ಷಿಸುವ ಸಲುವಾಗಿ ಅಕ್ಷತಾ ಪೂಜಾರಿ ಮತ್ತು ಆಕೆಯ ತಾಯಿಯ ಮೇಲೆ ಕರ್ತವ್ಯಕ್ಕೆ ಅಡ್ಡಿ ಎಂಬ ಸುಳ್ಳು ಕೇಸು ದಾಖಲಿಸಿದ್ದು ಎಷ್ಟು ಸರಿ. ? ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಸು ದಾಖಲಿಸಿ ಯುವತಿಗೆ ನ್ಯಾಯ ಒದಗಿಸಬೇಕು.

ಅಕ್ಷತಾ ಪೂಜಾರಿ ಅವರ ಜೊತೆ ಹಿಂದೂ ಸಮಾಜ ಜೊತೆಯಾಗಿ ನಿಲ್ಲುವ ಅಗತ್ಯ ಇದೆ. ಅಲ್ಲಿ ಆಗಿರುವ ಘಟನೆ ಪುನರಾವರ್ತನೆ ಆಗಬಾರದು. ಈ ಕಾನೂನು ವ್ಯವಸ್ಥೆಯಲ್ಲಿ ಮಹಿಳೆಯರಿಗೆ ರಕ್ಷಣೆ ಕೊಡಬೇಕಾಗಿರುವ ಆರಕ್ಷಕರು ರಕ್ಷಕರಾಗಿ ಇರಬೇಕು. ನಿಮ್ಮ ಇಲಾಖೆ ಮೇಲೆ ಇರುವ ನಂಬಿಕೆಯನ್ನು ಉಳಿಸಿಕೊಳ್ಳಿ ಎಂದು ರಮಿತ ಸೂರ್ಯವಂಶಿ ಹೇಳಿದ್ದಾರೆ.

Leave a Reply

Your email address will not be published. Required fields are marked *