Breaking
23 Mar 2026, Mon

ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವು

ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಕಿನ್ನಿಮುಲ್ಕಿಯಲ್ಲಿ ನಡೆದಿದೆ.

ಮಗುವಿನ ತಾಯಿ, ಮಗುವನ್ನು ಎತ್ತಿಕೊಂಡೇ ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದಾಗ ಕೈಯಿಂದ ಜಾರಿದ ಮಗು ಬಾವಿಗೆ ಬಿದ್ದಿದೆ ಎನ್ನಲಾಗಿದೆ. ತಕ್ಷಣ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ಹೊರತೆಗೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಮಗು ಮೃತಪಟ್ಟಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *