Breaking
10 May 2026, Sun

ಟ್ಯಾಂಕರ್‌ಗೆ ಡಿಕ್ಕಿಯಾದ ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಪತ್ತೆ!

ಮಂಗಳೂರು: ಟ್ಯಾಂಕರ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಿಷೇಧಿತ ಎಂಡಿಎಂಎ ಪತ್ತೆಯಾದ ಘಟನೆ ಡಿ.16ರಂದು ತಲಪಾಡಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು ಅವರನ್ನು ಪಲ್ಲಂ ಸಿದ್ದೀಕ್ ಮತ್ತು ಮಣಿಮುಂಡ ಆಡಂ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬಳಿಕ ಸ್ಥಳೀಯರು ಕಾರಿನೊಳಗೆ ಪರಿಶೀಲಿಸಿದಾಗ ನಿಷೇಧಿತ ಎಂಡಿಎಂಎ ಪತ್ತೆಯಾಗಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು, ಕಾರಿನಲ್ಲಿದ್ದ 130 ಗ್ರಾಂ ನಿಷೇಧಿತ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *