Breaking
26 Sep 2026, Sat

22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಚಿಕ್ಕಮಗಳೂರು : ಕಾಲೇಜು ವಿದ್ಯಾರ್ಥಿನಿಯೋವ೯ರು ಹಾಸ್ಟೆಲ್ ನಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಡಿ.17 ರಂದು ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಿವಾಸಿ ದಿಶಾ (22) ಎ೦ದು ಗುರುತಿಸಲಾಗಿದೆ.

ದಿಶಾ ಶೃಂಗೇರಿಯ ಜೆಸಿಬಿಎಂ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಬೆಳಿಗ್ಗೆ ಹಾಸ್ಟೆಲ್‌ನಲ್ಲಿದ್ದ ವೇಳೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಸಹಪಾಠಿಗಳು ನೆರವಿಗೆ ಧಾವಿಸಿದರೂ ದಿಶಾ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *