Breaking
26 Jun 2026, Fri

ರಸ್ತೆ ದಾಟುತ್ತಿದ್ದಾಗ ಬೈಕ್‌ ಡಿಕ್ಕಿ ಹೊಡೆದು ಪಾದಚಾರಿ ಸಾವು

ಉಡುಪಿ: ರಸ್ತೆ ದಾಟುತ್ತಿದ್ದಾಗ ಬೈಕ್‌ ಡಿಕ್ಕಿ ಹೊಡೆದು ಪಾದಚಾರಿಯೊಬ್ಬ ಮೃತಪಟ್ಟ ಘಟನೆ ಪಡುಬಿದ್ರಿ ಬಳಿಯ ತೆಂಕ ಎರ್ಮಾಳ್ ಎಂಬಲ್ಲಿ ಸತ್ಯಂ ಬಾರ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಮೃತಪಟ್ಟವರನ್ನು ತೆಂಕ ಎರ್ಮಾಳ್ ನಿವಾಸಿ ಅಣ್ಣಯ್ಯ ಬಂಗೇರ (67) ಎಂದು ಗುರುತಿಸಲಾಗಿದೆ.

ಬಾದಾಮಿ ಮೂಲದ ಹಸನ್ ಎಂಬವರು ಸುರತ್ಕಲ್ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಪರಿಣಾಮ ಅಣ್ಣಯ್ಯ ಬಂಗೇರ ಅವರಿಗೆ ತೀವ್ರ ಗಾಯಗಳಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದೇ ವೇಳೆ ಬೈಕ್ ಸವಾರ ಹಸನ್ ಕೂಡ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಉಚ್ಚಿಲದಿಂದ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಧಾವಿಸಿ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *