ಕೊಪ್ಪಳ: ಬೈಕ್‌ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಮೃತರನ್ನು ರಾಜಾಹುಸೇನ್(18), ಆಸೀಫ್(16) ಮತ್ತು ವಾಜಿದ್(19) ಎಂದು ಗುರುತಿಸಲಾಗಿದೆ.

ಈ ಮೂವರು ಶ್ರೀರಾಮನಗರದಿಂದ ಹೊಸಹಳ್ಳಿಗೆ ಬೈಕ್‌ನಲ್ಲಿ ಹೋಗುವಾಗ ಇಂದರಗಿ ಗ್ರಾಮದ ಸಮೀಪ ಬೊಲೆರೋ ವಾಹನ ಢಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಬೊಲೆರೋ ವಾಹನ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





