Breaking
10 May 2026, Sun

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಗಾಂಜಾ ಸಾಗಾಟ : ಆರೋಪಿಯ ಬಂಧನ

ಕಾಸರಗೋಡು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಯುವಕನೋವ೯ನನ್ನು ಪೊಲೀಸರು ಮಂಜೇಶ್ವರದಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉತ್ತರ ಪ್ರದೇಶದ ಮೊರಾದಾಬಾದ್‌ನ ಮಹಾಲಕ್‌ಪುರ್ ಮಾಫಿ ಮೂಲದ ನಜೀರ್ (35) ಎಂದು ಗುರುತಿಸಲಾಗಿದೆ.

ಮಂಜೇಶ್ವರ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇಲಾಖೆಯ ವಿಶೇಷ ಕಾರ್ಯಾಚರಣೆಯ ವೇಳೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ತನಿಖೆ ವೇಳೆ ಈತ ಮಂಜೇಶ್ವರ ಹಾಗೂ ಕುಂಬಳೆ ಭಾಗದ ಯುವಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಸಾಗಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *