Breaking
10 May 2026, Sun

ಕಾರಿಗೆ ಬೈಕ್ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಉಳ್ಳಾಲ: ಚಲಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುತ್ತಾರ್ ಸಮೀಪ ಡಿ. 17 ರಂದು ನಡೆದಿದೆ.

ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ.

ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಚಲಿಸುತ್ತಿದ್ದ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *