Breaking
10 May 2026, Sun

ಕೆಎಸ್‌ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ಮುಖಾಮುಖಿ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಗಂಭೀರ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಶಾಲಾ ಬಸ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಸಾಗರ ತಾಲೂಕಿನ ಇಡುವಾಣಿ ಸಮೀಪ ಡಿ.18 ರಂದು ಬೆಳಗ್ಗೆ ನಡೆದಿದೆ.

ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಖಾಸಗಿ ಶಾಲಾ ಬಸ್‌ ಮಧ್ಯೆ ಅಪಘಾತ ಸಂಭವಿಸಿದ್ದು, ಎರಡು ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಪರಿಣಾಮ ಎರಡು ವಾಹನಗಳ ಚಾಲಕರು ಸೇರಿ, ಅನೇಕ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *