ನಾಲ್ಕು ವರ್ಷಗಳಿಂದ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ: ಸುಮಾರು ನಾಲ್ಕು ವರ್ಷಗಳಿಂದ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಡಿ. 18 ರಂದು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ.

ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನ ವಿರುದ್ದ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು . ಸದ್ಯ ಆರೋಪಿಯನ್ನು ಡಿ. 18 ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *