Breaking
22 Mar 2026, Sun

ಸಾಮಾಜಿಕ‌ ಜಾಲತಾಣದಲ್ಲಿ ಬಜ್ಪೆ ಪೊಲೀಸರ ವಿರುದ್ದ ಅವಹೇಳನಕಾರಿಯಾಗಿ ನಿಂದನೆ: ಆರೋಪಿ ಪೊಲೀಸ್‌ ವಶಕ್ಕೆ

ಬಜ್ಪೆ: ಬಜ್ಪೆ ಪೊಲೀಸರ ವಿರುದ್ದ ಸಾಮಾಜಿಕ‌ ಜಾಲತಾಣದಲ್ಲಿ ಅವಹೇಳನಕಾರಿಯಾಗಿ‌ ನಿಂದನೆ ಮಾಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುರತ್ಕಲ್‌ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಎಂದು ಗುರುತಿಸಲಾಗಿದೆ.

mr_a_titude 22 ಎಂಬ ಇನ್‌ ಸ್ಟಾಗ್ರಾಮ್ ಪೇಜ್ ನಲ್ಲಿ ಆರೋಪಿಯು ಬಜ್ಪೆ ನಿಸರ್ಗ ಹೋಟೆಲ್‌ನ‌ ಫೋಟೊ ಬಳಸಿಕೊಂಡು‌ ಅದರ ಮೇಲೆ “ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜ್ಪೆ ಪೊಲೀಸರಿಂದ ರಾಜ ಅತಿಥ್ಯ, ದಿನಾಲೂ ನಿಸರ್ಗ ಹೋಟೆಲ್ ಬಜ್ಪೆಯಿಂದ ಬೀಫ್ ಊಟವನ್ನು ನೀಡಲಾಗುತ್ತಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರು ಅಪರಾಧಿಗಳೊಂದಿಗೆ ಸೇರಿಕೊಂಡು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಪೊಲೀಸ್ ನವರ ಮೇಲೆ ಇಟ್ಟಿರುವ ಭರವಸೆ ಸುಳ್ಳಾಗುತ್ತಿದೆ” ಎಂದು ಬರೆದು ಪೊಲೀಸರನ್ನು ನಿಂದಿಸಿ ಪೋಸ್ಟ್ ಮಾಡಿರುವುದಾಗಿ ದೂರಲಾಗಿದೆ.

ಅಭಿಷೇಕ್ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ, ಕೊಲೆಯತ್ನ, ಹಲ್ಲೆ ಪ್ರಕರಣ, ಕಾಪು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣಗಳು ದಾಖಲಾಗಿದೆ.

Leave a Reply

Your email address will not be published. Required fields are marked *