ಉಡುಪಿ: ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಮೀನುಗಾರರೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರು ಉಪ್ಪುಂದ ಗ್ರಾಮದ ಮಡಿಕಲ್ ಬಳಿಯ ಅರಬ್ಬಿ ಸಮುದ್ರದಲ್ಲಿ ನಡೆದಿದೆ.
ಮೃತಪಟ್ಟವರನ್ನು ಹರಿಶ್ಚಂದ್ರ ಖಾರ್ವಿ ಎಂದು ಗುರುತಿಸಲಾಗಿದೆ.

ಡಿ.15ರಂದು ಸಂಜೆ ಇತರ ಮೀನುಗಾರರೊಂದಿಗೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಹರಿಶ್ಚಂದ್ರ ಖಾರ್ವಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯಿಂದ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ.
ತಕ್ಷಣವೇ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇವರು ಡಿ.18ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




