Breaking
20 Sep 2026, Sun

ಮದುವೆ ಮಂಟಪದಲ್ಲಿ ಅಗ್ನಿ ಅವಘಡ: ತಪ್ಪಿದ ಅನಾಹುತ

ಮುಂಬೈ: ಬ್ಯಾಂಕ್ವೆಟ್ ಹಾಲ್‌ನಲ್ಲಿ ಮದುವೆ ಸಮಾರಂಭದ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದ ಘಟನೆ ಡಿ. 18ರಂದು ನಡೆದಿದೆ.

ಮದುವೆ ಮಂಟಪದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದಾಗಲೇ ಅಚಾನಕ್ ಆಗಿ ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎಂದು ಶಂಕಿಸಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *