ಬೆಳ್ತಂಗಡಿ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ಡಿ. 24 ಮತ್ತು 25 ರಂದು ನಡೆಯಲಿದೆ.

ಈ ಜಾತ್ರಾಮಹೋತ್ಸವದ ಪ್ರಯುಕ್ತ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಗ್ರೂಪ್ಸ್ ಕನಸಿನ ಮನೆ ಇದರ ಮಾಲಕರಾದ ಮೋಹನ್ ಕುಮಾರ್ ಉಜಿರೆ ಭಾಗವಹಿಸಲಿದ್ದು, ಇವರನ್ನು ಕ್ಷೇತ್ರದ ವತಿಯಿಂದ ಆಮಂತ್ರಣ ನೀಡಿ ಪ್ರೀತಿಪೂರ್ವಕವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡ, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಲ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರು, ಮಹಿಳಾ ಸಮಿತಿ ಗೌರವಾಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳಾಲು ಇದರ ಗೌರವಾಧ್ಯಕ್ಷರಾದ ಶಿವಕುಮಾರ ಬಾರಿತ್ತಾಯ, ಸೀತಾರಾಮ ಬೆಳಾಲು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.




