ಬೆಳ್ತಂಗಡಿ: ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ವಿಧಾನಸಭೆಯ ಅಧಿವೇಶನದಲ್ಲಿ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು.

ಈ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ ಎಲ್ ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಮಾಡಬೇಕು.

ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡುವಂತೆ ಮಾಡಬೇಕು ಎಂದು ಮನವಿಯನ್ನು ಮಾಡಿದರು.
ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆ ಮಾನ್ಯ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ಒತ್ತಾಯಿಸಿದರ ಜೊತೆಗೆ ಮಾನ್ಯ ಶಿಕ್ಷಣ ಸಚಿವರಲ್ಲಿ ವಿನಂತಿಸಿಕೊಂಡರು .



