Breaking
22 Mar 2026, Sun

ಡಿ. 24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

ಬೆಳ್ತಂಗಡಿ : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ಡಿ. 24 ಮತ್ತು 25 ರಂದು ನಡೆಯಲಿದೆ.

ಈ ಜಾತ್ರಾ ಮಹೋತ್ಸವದ ಸಲುವಾಗಿ ಕ್ಷೇತ್ರದ ಸಮಿತಿಯ ಸದಸ್ಯರು ಧರ್ಮಸ್ಥಳದ ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಕಾಯ೯ಕ್ರಮಕ್ಕೆ ಪ್ರೀತಿ ಪೂವ೯ಕವಾಗಿ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡ, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ,ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ,ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು,ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರು ,ಮಹಿಳಾ ಸಮಿತಿ ಗೌರವಾಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ,ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳಾಲು ಇದರ ಗೌರವಾಧ್ಯಕ್ಷರಾದ ಶಿವಕುಮಾರ ಬಾರಿತ್ತಾಯ, ಸೀತಾರಾಮ್ ಬೆಳಾಲು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *