Breaking
22 Mar 2026, Sun

ಡಿಸೆಂಬರ್ 21. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ವಿಟ್ಲ, ಕಲ್ಲಡ್ಕ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂಧು ಸ್ವ- ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಭಜನಾ ಪರಿಷತ್ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕಲ್ಲಡ್ಕ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 21 ಭಾನುವಾರದಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

ಈ ಕುರಿತು ಮಾಹಿತಿ ನೀಡಿದ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್ ಅವರು, ಕಲ್ಲಡ್ಕದ ಪುರ್ಲಿಪಾಡಿಯ ಮರಾಠಿ ಸಭಾಭವನದಲ್ಲಿ ಬೆಳಿಗ್ಗೆ ಗಂಟೆ 8 ರಿಂದ ಪೂಜೆ ಆರಂಭಗೊಳ್ಳಲಿದ್ದು , ಬಳಿಕ 11 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಕಲ್ಲಡ್ಕ ವಲಯದ ಅಧ್ಯಕ್ಷರಾದ ಜಯರಾಮ್ ರೈ ಬೊಳಂತೂರ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭಾ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯ ಜಗನ್ನಾಥ್ ಚೌಟ ಬದಿಗುಡ್ಡೆ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರುಗಳಾದ ಎ. ರುಕ್ಮಯ ಪೂಜಾರಿ, ಕೆ ಪದ್ಮನಾಭ ಕೊಟ್ಟಾರಿ, ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ, ಭಾಗವಹಿಸಲಿದ್ದಾರೆ.

ಗ್ರಾಮಾಭಿವೃದ್ದಿ ಯೋಜನೆಯ ವಿಟ್ಲ ಯೋಜನಾಧಿಕಾರಿ ಸುರೇಶ್ ಗೌಡ, ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ, ಜನಜಾಗೃತಿ ವೇದಿಕೆ ಅಧ್ಯಕ್ಷ ಬಟ್ಯಪ್ಪ ಶೆಟ್ಟಿ, ನೇತಾಜಿ ಯುವಕ ಮಂಡಲದ ಗೌರವಾಧ್ಯಕ್ಷ ನಾಗೇಶ್ ಕಲ್ಲಡ್ಕ, ಬಾಲ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ್ ಚೆಂಡೆ, ಕೆಲಿಂಜ ಶ್ರೀನಿಕೇತನ ಸಭಾಭವನದ ಅಧ್ಯಕ್ಷ ಕೊರಗಪ್ಪ ಗೌಡ, ಶ್ರೀದೇವಿ ಕಂಟ್ರಕ್ಷನ್ ಮಾಲಕ ಸಂದೀಪ್ ಶೆಟ್ಟಿ ಅರೆಬೆಟ್ಟು, ಪ್ರಗತಿಪರ ಕೃಷಿಕ ಜಯಪ್ರಕಾಶ್ ತೆಕ್ಕಿಪಾಪು ಮೊದಲಾದವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಧಾರ್ಮಿಕ ಸಭಾ ಕಾರ್ಯಕ್ರಮದ ನಂತರ ಸಾರ್ವಜನಿಕ ಅನ್ನದಾನ ಸೇವೆ ನಡೆದು ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ ಎಂದರು.

Leave a Reply

Your email address will not be published. Required fields are marked *