ಬೆಳಗಾವಿ: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಮೃತರನ್ನು ಮಂಜುನಾಥ್ ಬೈರ್ನಟ್ಟಿ (30) ಎಂದು ಗುರುತಿಸಲಾಗಿದೆ.

ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




