Breaking
23 Mar 2026, Mon

ಡಿ.21: ಹೊಕ್ಕಾಡಿಗೋಳಿಯಲ್ಲಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಬಂಟ್ವಾಳ: ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ.21ರಂದು ನಡೆಯಲಿದೆ.

ಬೆಳಗ್ಗೆ ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ಆಶೀರ್ವಚನ ನೀಡಲಿದ್ದು ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ . ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶಿ ಎ. ಜೀವಂದರ ಕುಮಾರ್ ಧ್ವಜಾರೋಹಣ ನೆರವೇರಿಸಲಿದ್ದು ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಂಸದ ಕ್ಯಾ| ಬೃಜೇಶ್ ಚೌಟ ಅವರು ಅಧ್ಯಕ್ಷತೆ ವಹಿಸಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ,ಬಳ್ಕುಂಜೆ ಕಂಬಳ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ದುಬೈ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಉದ್ಯಮಿ ಸಂಪತ್ ಶೆಟ್ಟಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಉಮಾನಾಥ ಕೋಟ್ಯಾನ್, ಅಶೋಕ್ ಕುಮಾರ್ ರೈ, ಎಸ್.ಎಲ್ ಭೋಜೇ ಗೌಡ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್, ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಅವರು ಅಧ್ಯಕ್ಷತೆ ವಹಿಸಲಿದ್ದು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲ್‌ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *