ಬಂಟ್ವಾಳ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯ ಗಣ್ಯರ ಸಮ್ಮುಖದಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿವರಂಜಿನಿ ಕಲಾಕೇಂದ್ರ ಪೊಳಲಿ/ಬೊಕ್ಕಸ ಚಾರಿಟೇಬಲ್ ಟ್ರಸ್ಟ್ (ರಿ.) ನ ವಿದ್ಯಾರ್ಥಿಗಳು ಗಾನಾಮೃತ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪ್ರದರ್ಶಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದ ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಹಾಗೂ ಸಹಕಾರ ನೀಡಿದ ಸಜೀಪ ನಡು ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ನಾಸಿರ್ ರವರಿಗೆ ಶಿವರಂಜಿನಿ ಕಲಾಕೇಂದ್ರದ ವತಿಯಿಂದ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.





