Breaking
23 Mar 2026, Mon

ವಿಟ್ಲದಲ್ಲಿ ಬಾಡಿಗೆಯ ಎರಡು ಮನೆಗಳು ಬೆಂಕಿಗಾಹುತಿ

ವಿಟ್ಲ : ವ್ಯಕ್ತಿಯೋವ೯ರ ಕುಟುಂಬದ ಎರಡು ಬಾಡಿಗೆ ಮನೆಗಳು ಬೆಂಕಿಗಾಹುತಿಯಾದ ಘಟನೆ ಕನ್ಯಾನದಲ್ಲಿ ನಡೆದಿದೆ.

ಕೆಳಗಿನಪೇಟೆಯಲ್ಲಿರುವ ಬಾಡಿಗೆ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ಸಂಭವಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *