Breaking
23 Mar 2026, Mon

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನಾ ಕಾರ್ಯಕ್ರಮ

ಧರ್ಮಸ್ಥಳ: ಗ್ರಾಮ ಪಂಚಾಯತ್ ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ(ರಿ.), ಸೇವಾಭಾರತಿ(ರಿ.), ಕನ್ಯಾಡಿ, ದುರ್ಗಾ ಮಾತೃ ಮಂಡಳಿ ಕನ್ಯಾಡಿ ಇದರ ಸಹಭಾಗಿತ್ವದಲ್ಲಿ ಸ್ವ- ಸಹಾಯ ಸಂಘದ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಡಿ. 19 ರಂದು ನಡೆಯಿತು.

ಕಾಯ೯ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್ ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿ ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಧನಲಕ್ಷ್ಮಿ ಅವರು ಮಾತನಾಡಿ, ಟೈಲರಿಂಗ್ ಕಲಿಕೆ ಅನೇಕ ಉದ್ಯೋಗದ ಅವಕಾಶಗಳನ್ನು ಒದಗಿಸಬಲ್ಲದು. “ದೀಪ ಜ್ಯೋತಿ ಹೇಗೆ ಬೆಳಗುತ್ತದೋ, ಹಾಗೆಯೇ ನೀವು ಈ ವಿದ್ಯೆಯನ್ನು ಉಪಯೋಗಿಸಿ ಸಮಾಜದಲ್ಲಿ ಬೆಳಗಬೇಕು” ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ, NRLM ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಪ್ರತಿಮಾ, ಪಂಚಾಯತ್ ಲೆಕ್ಕ ಸಹಾಯಕರು ಪ್ರಮೀಳಾ, ದುರ್ಗಾಮಾತೃ ಮಂಡಳಿ ಅಧ್ಯಕ್ಷರು ಹಾಗೂ ಸಬಲಿನಿ ಯೋಜನೆಯ ಸಂಚಾಲಕಿ ಮಮತಾ ಬಿ, ಕೌಶಲ್ಯ ವಲಯ ಮೇಲ್ವಿಚಾರಕರು ವೀಣಾಶ್ರೀ ಕೆ, ಪಂಚಾಯತ್ ಸದಸ್ಯರು ವಸಂತಿ, ಸುನಿತಾ, ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಶಾಂಭವಿ ಹಾಗೂ ಟೈಲರಿಂಗ್ ತರಬೇತುದಾರರಾದ ಸುಮತಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 40 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್ ರವರು ಮಾನ್ವಿಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟಕ್ಕೆ 3 ಹೊಲಿಗೆ ಯಂತ್ರ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಖಿ ಸುಚೇತಾ ಸ್ವಾಗತಿಸಿ, MBK ಚಂದ್ರಾವತಿ ನಿರೂಪಿಸಿ, LCRP ಪುಷ್ಪಾವತಿ ಧನ್ಯವಾದವಿತ್ತರು.

Leave a Reply

Your email address will not be published. Required fields are marked *