Breaking
26 Sep 2026, Sat

ಪತ್ರಿಕಾ ವಿತರಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ

ಬಂಟ್ವಾಳ: ಬೈಪಾಸ್ ಬಳಿ ಪತ್ರಿಕಾ ವಿತರಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 20 ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಂಟ್ವಾಳ ಬಡ್ಡಕಟ್ಟೆ – ದೈವಗುಡ್ಡೆ ನಿವಾಸಿ ಪ್ರಶಾಂತ್ ಬಾಳಿಗಾ (54) ಎಂದು ಗುರುತಿಸಲಾಗಿದೆ.

ಪೇಪರ್ ಮತ್ತು ಹಾಲನ್ನು ಮನೆ ಮನೆಗೆ ವಿತರಣೆ ಮಾಡುವ ಕೆಲಸದಲ್ಲಿ ತೊಡಗಿದ್ದ ಪ್ರಶಾಂತ್ ಬಾಳಿಗಾ ಅವರು ಎಂದಿನಂತೆ ಬೆಳಿಗ್ಗೆ 4 ಗಂಟೆಗೆ ಮನೆಯಿಂದ ಹೊರಟು ಕೆಲ ಮನೆಗಳಿಗೆ ಹಾಲು ಮತ್ತು ಪೇಪರ್ ಹಾಕಿದ್ದಾರೆ. ಬಳಿಕ ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆಗೆ ರಸ್ತೆ ಬದಿಯಲ್ಲಿ ಅವರ ಬೈಕ್ ಅನಾಥವಾಗಿ ನಿಂತಿರುವುದನ್ನು ಸಾರ್ವಜನಿಕರು ಗಮನಿಸಿ ಅನುಮಾನಗೊಂಡು ಬಾವಿಯಲ್ಲಿ ಪರಿಶೀಲಿಸಿದಾಗ ಮೃತದೇಹ ಕಂಡುಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ತಾಯಿ, ಪತ್ನಿ, ಐವರು ಸಹೋದರರು, ಇಬ್ಬರು ಸಹೋದರಿಯರು, ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿ ಬಂಧುಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *