Breaking
26 Sep 2026, Sat

ಅನಾರೋಗ್ಯದಿಂದ ಬಳಲುತ್ತಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಶಿಕ್ಷಕಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಡಿ. 20 ರಂದು ನಡೆದಿದೆ.

ಮೃತಪಟ್ಟ ಶಿಕ್ಷಕಿಯನ್ನು ಮಣಿಪಾಲದ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪಲ್ಲವಿ ಭಟ್(34) ಎಂದು ಗುರುತಿಸಲಾಗಿದೆ.

ಆಟೊ ಇಮ್ಯುನೋ ಖಾಯಿಲೆಯಿಂದಾಗಿ ಬಳಲುತಿದ್ದು ಕಳೆದ ಒಂದು ವಾರದ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಶಿಕ್ಷಕಿಯ ಅಕಾಲಿಕ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *