Breaking
11 Aug 2026, Tue

ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ: ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದಲ್ಲಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 19 ರಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂದು ಗುರುತಿಸಲಾಗಿದೆ.

ಪ್ರಭಾಕರ್ ಜೋಗಿ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು. ಬಳಿಕ ಪತ್ನಿ ಮತ್ತು ಮಗನೊಂದಿಗೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಪತ್ನಿ ಪ್ರಭಾಕರ್ ಅವರನ್ನು ಹುಡುಕಾಡಿದಾಗ ಮನೆ ಆವರಣದ ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ.

ಮೃತ ಪ್ರಭಾಕರ ಜೋಗಿಯವರು ನರ ದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದು ಆರೋಗ್ಯ ಸಮಸ್ಯೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *