Breaking
23 Mar 2026, Mon

ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ್ದ ಆಂಬ್ಯುಲೆನ್ಸ್ ಕಳ್ಳತನ: ಆರೋಪಿ ಬಂಧನ

ಉಪ್ಪಿನಂಗಡಿ: ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ್ದ ಆಂಬ್ಯುಲೆನ್ಸ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಡುಪಿ ಕಾರ್ಕಳ ನಿವಾಸಿ ಶೋದನ್ (22) ಎಂದು ಗುರುತಿಸಲಾಗಿದೆ.

ಡಿ. 19 ರಂದು ಕಡಬ ನಿವಾಸಿ ಸುರೇಶ್ ಅವರು ದಿನನಿತ್ಯದಂತೆ ಆಂಬುಲೆನ್ಸ್‌ ಅನ್ನು ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ, ಬದಲಿ ಚಾಲಕನ ಅನುಕೂಲತೆಗೆ ಆಕಸ್ಮಿಕ ಕರೆ ಬಂದ ಹಿನ್ನಲೆಯಲ್ಲಿ ಕೀಯನ್ನು ಆಂಬುಲೆನ್ಸ್‌ ನಲ್ಲಿ ಇಟ್ಟು ಮನೆಗೆ ತೆರಳಿದ್ದರು. ಡಿ. 20 ರಂದು ಮರಳಿ ಬಂದು ನೋಡಿದಾಗ , ಅಂಬ್ಯುಲೆನ್ಸ್ ಕಳವಾಗಿರುವುದು ಬೆಳಕಿಗೆ ಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಹಾಸನದಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಆರೋಪಿಯಿಂದ ಕಳವಾದ ಆಂಬುಲೆನ್ಸ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *