Breaking
26 Sep 2026, Sat

ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ : ಸ್ಕೂಟರ್‌ ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ರಾಮಲ್ ಕಟ್ಟೆ ಎಂಬಲ್ಲಿ ಅಪರಿಚಿತ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸ್ಕೂಟರ್‌ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡವರನ್ನು ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.

ಉಸ್ಮಾನ್ ಅವರು ಅಂಗಡಿಯಿಂದ ಹಾಲು ಖರೀದಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಉಸ್ಮಾನ್ ಅವರಿಗೆ ಗಂಭೀರ ಗಾಯವಾಗಿದೆ.

ತಕ್ಷಣವೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *