ಕಲ್ಲಡ್ಕ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ಡಿ. 22 ರಂದು ಕಲಿಕಾ ಹಬ್ಬ ಕಾರ್ಯಕ್ರಮ ಜರಗಿತು.
ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಸುರೇಂದ್ರ ರಾವ್ ಇವರ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದ ಸಾಮರ್ಥ್ಯವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದಾಗ ಕಲಿಕೆ ಪೂರ್ಣಗೊಳ್ಳಲು ಸಾಧ್ಯ, ಇದಕ್ಕಾಗಿ ಶಿಕ್ಷಕರು ಹಾಗೂ ಪೋಷಕರು ಶ್ರಮಿಸಬೇಕು ಎಂದರು.

ಕಡೇಶಿವಾಲಯ ಕ್ಲಸ್ಟರ್ ಗೆ ಸಂಬಂಧಿಸಿದ ಶಾಲೆಗಳ ವಿದ್ಯಾರ್ಥಿಗಳು ಈ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದರು.
ನಿವೃತ್ತ ಮುಖ್ಯ ಶಿಕ್ಷಕ ಬಾಬು ಗೌಡ ” ಕಲಿಕಾ ಹಬ್ಬ” ಹೆಸರನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಬನಾರಿ, ಗಂಗಾಧರ ಶೇರಾ ಮಾಲಕರು ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್, ಚೆನ್ನಪ್ಪ ಎಸ್ ಅಂಚನ್ ಎಸ್‌ಡಿಎಂ ಸಿ ಮಾಜಿ ಅಧ್ಯಕ್ಷರು, ಕೋಮಲಾಂಗಿ ಜಿ ನಿವೃತ್ತ ಮುಖ್ಯ ಶಿಕ್ಷಕರು, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸುಧಾಕರ್ ಭಟ್, ಕಡೇಶಿವಾಲಯ ಶಾಲೆ ಮುಖ್ಯ ಶಿಕ್ಷಕ ಬಾಬು ಪೂಜಾರಿ, ಚಂದ್ರಶೇಖರ ಎಸ್ ಡಿ ಎಂ ಸಿ ಅಧ್ಯಕ್ಷರು, ಚಿದಾನಂದ ಬೀರ ಕೋಡಿ ಅಧ್ಯಕ್ಷರು ಹಿರಿಯ ವಿದ್ಯಾರ್ಥಿ ಸಂಘ, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಉಷಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಅನಿತಾ ಕುಮಾರಿ ಸ್ವಾಗತಿಸಿ, ಗೌರವ ಶಿಕ್ಷಕಿ ಸುರಕ್ಷಾ ವಂದಿಸಿದರು. ಸಹ ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ಕಾರ್ಯಕ್ರಮದ ನಿರೂಪಿಸಿದರು. ಹಿರಿಯ ಶಿಕ್ಷಕರಾದ ಶ್ರೀ ಗೋಪಾಲಗೌಡ ಗೌರವ ಶಿಕ್ಷಕಿ ಸುಮಲತಾ ಹಾಗೂ ಗೌರವ ಶಿಕ್ಷಕಿ ಅಭಿಜ್ಞಾ ಸಹಕರಿಸಿದರು. ಎಸ್‌ಡಿಎಂಸಿಯ ಸರ್ವ ಸದಸ್ಯರು ಪೋಷಕರು ವಿದ್ಯಾರ್ಥಿಗಳು ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸಿದರು.




